ಸೆಂಚುರಿಯನ್(ದಕ್ಷಿಣ ಆಫ್ರಿಕಾ): ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಆರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ 204 ರನ್ ಗಳಿಗೆ ಆಲೌಟ್ ಆಗಿದೆ.
ಸೆಂಚುರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದರಿಂದಾಗಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ಆಟಗಾರರು ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ್ದು 204 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಭಾರತಕ್ಕೆ 205 ರನ್ ಗಳ ಗುರಿ ನೀಡಿದೆ.
ಆಫ್ರಿಕಾ ಪರ ಮಾರ್ಕ್ರಾಮ್ 24, ಎಬಿಡಿ ವಿಲಿಯರ್ಸ್ 30, ಜೋಂಡಾ 54 ಮಾರ್ಕೆಲ್ 20 ಫೆಹ್ಲುಕ್ವೇವೊ 34 ರನ್ ಗಳಿಸಿದ್ದಾರೆ.
ಭಾರತ ಪರ ಶಾರ್ದೂಲ್ ಠಾಕೂರ್ 4, ಬುಮ್ರಾ, ಚಹಾಲ್ ತಲಾ 2, ಪಾಂಡ್ಯ ಮತ್ತು ಕುಲ್ದೀಪ್ ತಲಾ 1 ವಿಕೆಟ್ ಪಡೆದಿದ್ದಾರೆ.
ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 4-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.