ಎಬಿಡಿ ವಿಲಿಯರ್ಸ್, ವಿರಾಟ್ ಕೊಹ್ಲಿ
ಕ್ರಿಕೆಟ್
ಪಂದ್ಯದ ಬಳಿಕ ಆಪ್ತಮಿತ್ರರಾದ ಎಬಿಡಿ-ಕೊಹ್ಲಿ ಆಪ್ತ ಅಪ್ಪುಗೆ
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲೂ ಪ್ರವಾಸಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಜಯ...
ಸೆಂಚೂರಿಯನ್(ದಕ್ಷಿಣ ಆಫ್ರಿಕಾ): ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲೂ ಪ್ರವಾಸಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ.
ಈ ಮಧ್ಯೆ ಆಪ್ತಮಿತ್ರರಾದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪಂದ್ಯದ ಬಳಿಕ ಅಪ್ಪುಗೆ ಮೂಲಕ ವಿದಾಯ ಹೇಳಿದರು.
ಸೆಂಚುರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಜಯ ಗಳಿಸಿತ್ತು. ಈ ಮೂಲಕ 25 ವರ್ಷಗಳ ಬಳಿಕ ಆಫ್ರಿಕಾ ನೆಲದಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 5-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ