ಈಗಾಗಲೇ 6 ಪಂದ್ಯಗಳ ಏಕದಿನ ಸರಣಿಯನ್ನು 5-1ರ ಅಂತರದಲ್ಲಿ ಹೀನಾಯವಾಗಿ ಸೋತಿರುವ ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ಏಕದಿನ ಸರಣಿ ಗೆದ್ದಿರುವ ಭಾರತ ತಂಡ ಆತ್ಮವಿಶ್ವಾಸದಲ್ಲಿರುವ ಭಾರತ ಟಿ20 ಸರಣಿಯನ್ನೂ ಗೆಲ್ಲುವ ಮೂಲಕ ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಆಗುವ ತವಕದಲ್ಲಿದೆ. ಇನ್ನು ಸರಣಿಗೂ ಮೊದಲೇ ಆಪ್ರಿಕಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ಎಬಿಡಿವಿಲಿಯರ್ಸ್ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ.