ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಗಾಯದ ಸಮಸ್ಯೆ?

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಗಾಯದ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 
ಜೋಹಾನ್ಸ್ ಬರ್ಗ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಗಾಯದ ಆತಂತಕ್ಕೆ ಒಳಗಾಗಿದ್ದರು. 
ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತ್ತು. ಈ ವೇಳೆ ಬ್ಯಾಟಿಂಗ್ ಮಾಡಿದ್ದ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ ಎರಡು ಬೌಂಡರಿ 1 ಸಿಕ್ಸರ್ ಸೇರಿದಂತೆ 26 ರನ್ ಬಾರಿಸಿದ್ದರು. ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ್ದ ಕೊಹ್ಲಿ ನಂತರ ಫೀಲ್ಡಿಂಗ್ ವೇಳೆ ಬಹುತೇಕ ಸಮಯ ಮೈದಾನದಿಂದ ಹೊರಗುಳಿದಿದ್ದರು. 
ಈ ಬಗ್ಗೆ ಟೀಂ ಇಂಡಿಯಾ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಸ್ವತಃ ಕ್ಯಾಪ್ಟನ್ ಕೊಹ್ಲಿ, ಮೊದಲು ಬ್ಯಾಟಿಂಗ್ ಮಾಡುತ್ತಿರುವಾಗ ಸಿಂಗಲ್ ಗಳಿಸುತ್ತಿರಬೇಕಾದರೆ ಗಾಯದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಸ್ನಾಯು ಸೆಳೆತದ ಭೀತಿಗೊಳಗಾಗಿರುವ ಕೊಹ್ಲಿ ಮುಂಜಾಗ್ರತಾ ಕ್ರಮವಾಗಿ ಮೈದಾನವನ್ನು ತೊರೆದು ವೈದ್ಯರಿಂದ ಪರೀಕ್ಷೆ ಮಾಡಿಸಿಕೊಂಡಿದ್ದರು. 
ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದ ದ್ವಿತೀಯ ಟಿ20 ಪಂದ್ಯದಲ್ಲಿ ಆಡುವ ಭರವಸೆಯನ್ನು ನೀಡಿದ್ದಾರೆ. 
ಆಫ್ರಿಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 28 ರನ್ ಗಳ ಅಂತರದ ಗೆಲುವು ದಾಖಲಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com