ನವದೆಹಲಿ: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 64 ರನ್ ಹೊಡೆಸಿಕೊಳ್ಳುವ ಮೂಲಕ ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಟೀಂ ಇಂಡಿಯಾದ ಬೆಸ್ಟ್ ಅಂಡ್ ವರ್ಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.
ಸೆಂಚೂರಿಯನ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಚಹಾಲ್ ನಾಲ್ಕು ಓವರ್ ಗಳಲ್ಲಿ ವಿಕೆಟ್ ಪಡೆಯದೇ 64 ರನ್ ಹೊಡೆಸಿಕೊಂಡಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಅತೀ ದುಬಾರಿ ಬೌಲರ್ ಎನಿಸಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ 16 ವಿಕೆಟ್ ಗಳನ್ನು ಪಡೆದಿದ್ದ ಚಹಾಲ್ ತಂಡ ನಾಯಕ ವಿರಾಟ್ ಕೊಹ್ಲಿಯ ಪ್ರಮುಖ ಅಸ್ತ್ರವೆನಿಸಿದ್ದರು. ಆದರೆ ಟಿ20 ಸರಣಿಯಲ್ಲಿ ಅವರು ವೈಫಲ್ಯ ಅನುಭವಿಸುತ್ತಿದ್ದಾರೆ.
ಇನ್ನು ಇದೇ ಪಂದ್ಯದಲ್ಲಿ ಚಹಾಲ್ ಒಟ್ಟು 7 ಸಿಕ್ಸರ್ ಗಳನ್ನು ಹೊಡೆಸಿಕೊಂಡಿದ್ದರು. ಇದು ಟಿ20 ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸ ಹೊಡೆಸಿಕೊಂಡಿರುವ ಆಟಗಾರ ಎಂಬ ಅಪಖ್ಯಾತಿಗೂ ಪಾತ್ರರಾಗಿದ್ದಾರೆ.