ತಂಡದಿಂದ ಹೊರಗಿದ್ದರು ಧವನ್ಗೆ ಹೆಡ್ ಮಸಾಜ್ ಮಾಡಿದ ಕೊಹ್ಲಿ, ಫೋಟೋ ವೈರಲ್

ಟೀಂ ಇಂಡಿಯಾದ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಗಾಯ ಸಮಸ್ಯೆಯಿಂದಾಗಿ...
ವಿರಾಟ್ ಕೊಹ್ಲಿ, ಶಿಖರ್ ಧವನ್
ವಿರಾಟ್ ಕೊಹ್ಲಿ, ಶಿಖರ್ ಧವನ್
Updated on: 
ನವದೆಹಲಿ: ಟೀಂ ಇಂಡಿಯಾದ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಗಾಯ ಸಮಸ್ಯೆಯಿಂದಾಗಿ ತಂಡದಿಂದ ದೂರ ಉಳಿದಿದ್ದು ಅವರು ಮಾಡಿದಂತಹ ಕೆಲಸ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೈದಾನಕ್ಕೆ ಇಳಿಯದಿದ್ದರು ತಂಡದೊಂದಿಗೆ ಇದ್ದು ಅಗತ್ಯ ನೆರವನ್ನು ನೀಡಿದ್ದಾರೆ. ತಂಡಕ್ಕೆ ತಮ್ಮ ನೆರವು ಬೇಕಾದಾಗ ಎಂದಿಗೂ ಕೂಡ ಅದರಿಂದ ಕೊಹ್ಲಿ ತಪ್ಪಿಸಿಕೊಂಡಿಲ್ಲ. ಅಂತ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರಿಗೆ ಹೆಡ್ ಮಸಾಜ್ ಮಾಡುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಏಕದಿನ ಸರಣಿ ಮತ್ತು ಟಿ20 ಸರಣಿಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com