ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಳಿಕ ಮೊರ್ನೆ ಮಾರ್ಕೆಲ್ ಕ್ರಿಕೆಟ್ ಬದುಕಿಗೆ ವಿದಾಯ

ದಕ್ಷಿಣ ಆಫ್ರಿಕಾದ ವೇಗಿ ಮೊರ್ನೆ ಮಾರ್ಕೆಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ತಾವು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.
ಮೊರ್ನೆ ಮಾರ್ಕೆಲ್
ಮೊರ್ನೆ ಮಾರ್ಕೆಲ್
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ವೇಗಿ ಮೊರ್ನೆ ಮಾರ್ಕೆಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ತಾವು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.
33 ವರ್ಷದ ಮೊರ್ನೆ ಮಾರ್ಕೆಲ್ ಅವರು ಈ ನಿರ್ಧಾರ ಕ್ರಿಕೆಟ್ ಲೋಕದಲ್ಲಿ ಅಚ್ಚರಿಗೆ ಕಾರಣವಾಗಿದೆ. ಇನ್ನು ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸುತ್ತಿರುವುದರ ಬಗ್ಗೆ ಮಾತನಾಡಿರುವ ಮಾರ್ಕೆಲ್ ನಾನು ಸರಿಯಾದ ಸಮಯದಲ್ಲಿ ನಿವೃತ್ತಿ ಪಡೆಯುತ್ತಿದ್ದೇನೆ. ನಂತರ ನನ್ನ ಇತರ ಬದ್ಧತೆಗಳ ಕುರಿತು ಗಮನ ಹರಿಸುವುದಾಗಿ ಹೇಳಿದ್ದಾರೆ. 
ನಿವೃತ್ತಿ ಬಳಿಕ ತನ್ನ ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಬೇಕು ಎಂದು ನಿರ್ಧಾರಿಸಿ ಮೊರ್ನೆ ಮಾರ್ಕೇಲ್ ಕ್ರಿಕೆಟ್ ಗೆ ವಿದಾಯ ಘೋಷಿಸುವ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದ್ದಾರೆ. 
ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಡರ್ಬನ್ ನಲ್ಲಿ ಗುರುವಾರ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. 
2006ರ ಜನವರಿಯಲ್ಲಿ ನಡೆದಿದ್ದ ಭಾರತ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಕ್ರಿಕೆಟ್ ಬದುಕಿಗೆ ಮಾರ್ಕೆಲ್ ಪಾದಾರ್ಪಣೆ ಮಾಡಿದ್ದರು. ಟೆಸ್ಟ್ ನಲ್ಲಿ 81 ಪಂದ್ಯಗಳಲ್ಲಿ ಆಡಿರುವ ಅವರು 283 ವಿಕೆಟ್ ಗಳನ್ನು ಪಡೆದಿದ್ದಾರೆ. 
2007ರಲ್ಲಿ ಮೊದಲ ಏಕದಿನ ಪಂದ್ಯವನ್ನಾಡಿದ್ದ ಮಾರ್ಕೆಲ್ 112 ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ 186 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 41 ಟಿ20 ಪಂದ್ಯಗಳಲ್ಲಿ 46 ವಿಕೆಟ್ ಗಳನ್ನು ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com