ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಅಗ್ರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ರಬಾಡಾ, ಭಾರತದ ಭುವಿ ಜೀವನಶ್ರೇಷ್ಠ ಸಾಧನೆ

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆ್ಯಷಸ್ ಮತ್ತು ಭಾರಕ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಟೆಸ್ಟ್ ಕ್ರಿಕೆಟ್ ಆಟಗಾರರ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೇಪ್ ಟೌನ್: ಅತ್ತ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆ್ಯಷಸ್ ಮತ್ತು ಭಾರಕ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಟೆಸ್ಟ್ ಕ್ರಿಕೆಟ್ ಆಟಗಾರರ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.
ಆ್ಯಷಸ್ ನಲ್ಲಿನ ಉತ್ತಮ ನಿರ್ವಹಣೆಯಿಂದಾಗಿ ಟೆಸ್ಟ್ ಬ್ಯಾಟ್ಸಮನ್ ಗಳ ರ‍್ಯಾಂಕಿಂಗ್  ಪಟ್ಟಿಯಲ್ಲಿ ಆಸಿಸ್ ತಂಡದ ಸ್ಟಾರ್ ಬ್ಯಾಟ್ಸಮನ್ ಸ್ಟೀವ್ ಸ್ಮಿತ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇನ್ನು 2ನೇ ಸ್ಥಾನದಲ್ಲಿ ಇಂಗ್ಲೆಂಡ್  ತಂಡದ ಜೋರೂಟ್ ಇದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಬೌಲರ್ ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ವೇಗಿ ರಬಾಡಾ ಅಗ್ರ ಸ್ಥಾನಕ್ಕೇರಿದ್ದು, ಇಂಗ್ಲೆಂಡ್ ತಂಡದ ಜೇಮ್ಸ  ಆ್ಯಂಡರ್ಸನ್ 2ನೇ ಸ್ಥಾನದಲ್ಲಿದ್ದು, ಭಾರತದ ರವೀಂಜ್ರ ಜಡೇಜಾ ಮತ್ತು ಆರ್ ಅಶ್ವಿನ್ 3 ಮತ್ತು 4ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. 
ಇನ್ನು ಬೌಲರ್ ಗಳ ರ‍್ಯಾಂಕಿಂಗ್  ಪಟ್ಟಿಯಲ್ಲಿ ಭಾರತದ ವೇಗಿ ಭುವನೇಶ್ವರ್ ಕುಮಾರ್ ಜೀವನಶ್ರೇಷ್ಠ ಸಾಧನೆ ಮಾಡಿದ್ದು ಇದೇ ಮೊದಲ ಬಾರಿಗೆ 8 ಸ್ಥಾನ ಜಿಗಿದು 22ನೇ ಸ್ಥಾನಕ್ಕೇರಿದ್ದಾರೆ. ಇತ್ತ ಆಲ್ ರೌಂಡರ್ ಗಳ ಪಟ್ಟಿಯಲ್ಲಿ  ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಅಗ್ರ ಸ್ಥಾನದಲ್ಲಿದ್ದು, ಭಾರತದ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ 2 ಮತ್ತು 3ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com