ಎರಡನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಟೀಂ ಇಂಡಿಯಾ 183/5

ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾದ 5 ವಿಕೆಟ್ ನಷ್ಟಕ್ಕೆ 183 ರನ್ ಪೇರಿಸಿದೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಸೆಂಚೂರಿಯನ್: ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾದ 5 ವಿಕೆಟ್ ನಷ್ಟಕ್ಕೆ 183 ರನ್ ಪೇರಿಸಿದೆ. 
ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 335 ರನ್ ಗಳಿಗೆ ಸರ್ವಪತನ ಕಂಡಿದ್ದಾರೆ. ನಂತರ ಇನ್ನಿಂಗ್ಸ್  ಆರಂಭಿಸಿರುವ ಟೀಂ ಇಂಡಿಯಾ ಎರಡನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿದೆ. 
ಟೀಂ ಇಂಡಿಯಾ ಪರ ಮುರಳಿ ವಿಜಯ್ 46, ಕೆಎಲ್ ರಾಹುಲ್ 10, ಚೇತೇಶ್ವರ ಪೂಜಾರ 0, ರೋಹಿತ್ ಶರ್ಮಾ 10, ಪಾರ್ಥಿವ್ ಪಟೇಲ್ 19 ವಿರಾಟ್ ಕೊಹ್ಲಿ ಅಜೇಯ್ 85 ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 11 ರನ್ ಗಳಿಸಿ ಮೂರನೇ ದಿನದಾಟ ಪ್ರಾರಂಭಿಸಲಿದ್ದಾರೆ. 
ಆಫ್ರಿಕಾ ಪರ ಎಲ್ಗರ್ 31, ಮಾರ್ಕ್ ರಾಮ್ 94, ಆಶೀಂ ಹಾಮ್ಲಾ 82, ಡುಪ್ಲೇಸಿಸ್ 63 ರನ್ ಗಳಿಸಿದ್ದಾರೆ. 
ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ 3 ಮತ್ತು ಮೊಹಮ್ಮದ್ ಶಮಿ 1 ವಿಕೆಟ್ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com