ಸೆಂಚೂರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 146 ಎಸೆತಗಳಲ್ಲಿ 100 ರನ್ ಸಿಡಿಸಿದ್ದು ಆ ಮೂಲಕ 21ನೇ ಟೆಸ್ಟ್ ಶತಕ ಸಿಡಿಸಿದ್ದಾರೆ.