ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ.
ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ತಮ್ಮ ಟೆಸ್ಟ್ ಕ್ರಿಕೆಟ್ ಬದುಕಿನಲ್ಲೇ ಇದೇ ಮೊದಲ ಬಾರಿಗೆ ಗೋಲ್ಡನ್ ಡಕ್ ಔಟ್ ಆಗಿದ್ದಾರೆ.
ಚೇತೇಶ್ವರ ಪೂಜಾರ ಅವರು ತಮ್ಮ ಮೊದಲ ಎಸೆತದಲ್ಲೇ ರನೌಟ್ ಗೆ ಬಲಿಯಾಗುವ ಮೂಲಕ ಗೋಲ್ಡನ್ ಡಕ್ ಗೆ ತುತ್ತಾಗಿದ್ದಾರೆ. ಉತ್ತಮ ಕ್ಷೇತ್ರರಕ್ಷಣೆ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಆಟಗಾರ ಲುಂಗಿ ಎನ್ಗಿಡಿ ನೇರ ತ್ರೋ ಮಾಡುವ ಮೂಲಕ ಪೂಜಾರರನ್ನು ರನೌಟ್ ಮಾಡಿದ್ದರು.