ಸಚಿನ್, ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದ್ದರು. ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದ್ದರು. ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ ಬರೆದಿದ್ದಾರೆ. 
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ವಿರಾಟ್ ಕೊಹ್ಲಿ 900 ಅಂಕ ಸಂಪಾದಿಸುವ ಮೂಲಕ 900 ಅಂಕ ದಾಟಿದ ಎರಡನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದು ಈ ಮೂಲಕ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಮತ್ತು ಭಾರತ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ ಮತ್ತು ರಾಹುಲ್ ದ್ರಾವಿಡ್ 900ರ ಸನಿಹ ಬಂದರೂ ಕ್ರಮವಾಗಿ 898 ಮತ್ತು 892 ಅಂಕ ಸಂಪಾದಿಸಿದ್ದರು. 
ಆಫ್ರಿಕಾ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 150ಕ್ಕೂ ಹೆಚ್ಚು ರನ್ ಸಿಡಿಸಿ ರ್ಯಾಂಕಿಂಗ್ ನಲ್ಲಿ ಇಂಗ್ಲೆಂಡ್ ಜೋ ರೂಟ್ ರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ. ಇನ್ನು ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ 947 ಅಂಕದೊಂದಿಗೆ ನಂ.1 ಸ್ಥಾನದಲ್ಲಿದ್ದಾರೆ. 
ಟೆಸ್ಟ್ ಕ್ರಿಕೆಟ್ ನಲ್ಲಿ 900ಕ್ಕಿಂತ ಹೆಚ್ಚು ಅಂಕ ಗಳಿಸಿದ್ದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಸುನೀಲ್ ಗಾವಸ್ಕರ್ ಭಾಜನರಾಗಿದ್ದಾರೆ. ಸುನೀಲ್ ಗವಾಸ್ಕರ್ 1979ರಲ್ಲಿ ತಮ್ಮ 50ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಮೂಲಕ ತಮ್ಮ ಅಂಕ ಗಳಿಕೆಯನ್ನು 887ರಿದಂ 916ಕ್ಕೇರಿಸಿದ್ದರು. 
ಆಸ್ಟ್ರೇಲಿಯಾದ ಮಾಜಿ ಆಟಗಾರ ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ 961 ಅಂಕ ಗಳಿಸಿದ್ದು ಇದು ಸರ್ವಶ್ರೇಷ್ಠ ಸಾಧನೆಯಾಗಿ ಉಳಿದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com