ಇಂದು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 5ನೇ ಆವೃತ್ತಿಯ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 40 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 308ರನ್ ಸೇರಿಸಿತು. ಗೆಲುವಿಗಾಗಿ ಪಾಕ್ ನೀಡಿದ 309 ರನ್ ಗಳ ಗುರಿ ಬೆನ್ನತ್ತಿದ ಭಾರತ 8 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. ಈ ಮೂಲಕ ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತು.