ಈಗಿನ ಪೀಳಿಗೆಯ ಪಾಕ್- ಭಾರತ ಕ್ರಿಕೆಟ್ ತಂಡಗಳ ಸ್ಪರ್ಧೆಗೆ ರಾಜಕೀಯ ಅಡ್ಡಿ: ಶೋಯಬ್ ಅಖ್ತರ್

ರಾಜಕೀಯ ಕಾರಣದಿಂದಾಗಿ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ನಡೆಯುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
ಶೋಯಬ್ ಅಖ್ತರ್
ಶೋಯಬ್ ಅಖ್ತರ್
ನವದೆಹಲಿ: ರಾಜಕೀಯ ಕಾರಣದಿಂದಾಗಿ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ನಡೆಯುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ. 
2007 ರಿಂದ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದಲ್ಲಿ ಯಾವುದೇ ಕ್ರಿಕೆಟ್ ಸರಣಿಯನ್ನು ಈ ವರೆಗೆ ಆಡಿಲ್ಲ. 2012 ರಲ್ಲಿ ಸಣ್ಣ ಸರಣಿಯನ್ನು ಆಡಲಾಗಿತ್ತು, ಆದರೆ ಉಭಯ ದೇಶಗಳ ನಡುವೆ ಮಾತುಕತೆ ಸ್ಥಗಿತಗೊಂಡಿರುವುದರಿಂದ ಪೂರ್ಣ ಪ್ರಮಾಣದಲ್ಲಿ ಭಾರತ-ಪಾಕ್ ನಡುವೆ ಕ್ರಿಕೆಟ್ ಸರಣಿ ನಡೆಯುವುದು ಅನುಮಾನವಾಗಿದೆ.
ಪಿಟಿಐ ಗೆ ನೀಡಿರುವ ಹೇಳಿಕೆಯಲ್ಲಿ ಈ ಬಗ್ಗೆ ಮಾತನಾಡಿರುವ ಶೋಯಬ್ ಅಖ್ತರ್, ಭಾರತ-ಪಾಕ್ ಕ್ರಿಕೆಟ್ ಸ್ಪರ್ಧೆ ನಡೆಯುವುದಕ್ಕೆ ಅವಕಾಶ ಸಿಗುತ್ತಿಲ್ಲ. ಪಾಕಿಸ್ತಾನದ ಕ್ರಿಕೆಟಿಗರಿಗೆ ಭಾರತದಲ್ಲೂ ಅಭಿಮಾನಿಗಳಿದ್ದಾರೆ, ನಾನೂ ಸಹ ಭಾರತೀಯರ ಪ್ರೀತಿ ಪಡೆದಿದ್ದೇನೆ ಈಗಿನ ಪೀಳಿಗೆಯ ಕ್ರಿಕೆಟಿಗರಿಗೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸ್ಪರ್ಧೆಯ ಅನುಭವವಾಗಬೇಕು ಎಂದು ಶೋಯಬ್ ಅಖ್ತರ್ ಹೇಳಿದ್ದಾರೆ. 
ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿಗಳು ಪುನಾರಂಭಗೊಳ್ಳಬೇಕು, ಆಗದೇ ಇದ್ದರೆ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು, ಬಹುಶಃ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗುವವರೆಗೂ ಕ್ರಿಕೆಟ್ ಸರಣಿ ಆರಂಭವಾಗುವುದಿಲ್ಲ ಎಂದು ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com