ಕೋಲ್ಕತ್ತಾ: ಸೈಯದ್ ಮುಷ್ತಾಕ್ ಅಲಿ ಟಿ20 ಪಂದ್ಯಾವಳಿಯಲ್ಲಿ ರಾಜಸ್ಥಾನ ತಂಡದ ವಿರುದ್ಧ 41 ರನ್ ಗಳಿಂದ ಗೆಲುವು ಸಾಧಿಸುವ ಮೂಲಕ ದೆಹಲಿ ತಂಡ ಮೊದಲ ಬಾರಿಗೆ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ ತಂಡ 20 ಓವರ್ ಗೆ 6 ವಿಕೆಟ್ ನಷ್ಟಕ್ಕೆ 153 ರನ್ ಬಾರಿಸಿತ್ತು. 154 ರನ್ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ 19.1 ಓವರ್ ಗೆ 112 ರನ್ ಬಾರಿಸಿ ಆಲೌಟ್ ಆಯಿತು.