ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ವಿಶೇಷ ದಾಖಲೆ ಮುರಿದ ವಿರಾಟ್ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿದ ಆಟಗಾರರ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್...
ವಿರಾಟ್ ಕೊಹ್ಲಿ, ಬ್ರಿಯಾನ್ ಲಾರಾ
ವಿರಾಟ್ ಕೊಹ್ಲಿ, ಬ್ರಿಯಾನ್ ಲಾರಾ
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿದ ಆಟಗಾರರ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಆಟಗಾರ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಮುರಿದಿದ್ದಾರೆ. 
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಜೋಹನ್ಸ್ ಬರ್ಗ್ ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎರಡು ಇನ್ನಿಂಗ್ಸ್ ನಲ್ಲಿ 54 ಮತ್ತು 41 ರನ್ ಸಿಡಿಸುವ ಮೂಲಕ ಕೊಹ್ಲಿ 12 ಅಂಕ ಗಳಿಸಿದ್ದು ಒಟ್ಟಾರೆ 912 ಅಂಕಗಳೊಂದಿಗೆ ಶ್ರೇಯಾಂಕದ ಪಟ್ಟಿಯಲ್ಲಿ 26ನೇ ಸ್ಥಾನ ಪಡೆದಿದ್ದಾರೆ. 
ಟೆಸ್ಟ್ ಆಟಗಾರರ ಶ್ರೇಯಾಂಕ ಪಟ್ಟಿಯಲ್ಲಿ ಬ್ರಿಯಾನ್ ಲಾರಾ(911), ಕೇವಿನ್ ಪೀಟರ್ ಸನ್(909), ಹಶೀಮ್ ಆಮ್ಲಾ(907), ಶಿವನಾರಾಯಣ್ ಚಂದ್ರಪಾಲ್(901) ಮತ್ತು ಮೈಕಲ್ ಕ್ಲಾಕ್ 900 ಅಂಕಗಳನ್ನು ಪಡೆದಿದ್ದಾರೆ. 
ಐಸಿಸಿಯ ಆಲ್ ಟೈಂ ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡಾನ್ ಬ್ರಾಡ್ ಮನ್ 961 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೇ ಅದೇ ತಂಡದ ನಾಯಕ ಸ್ಟೀವ್ ಸ್ಮಿತ್ 947 ಅಂಕಗಳನ್ನು ಸಂಪಾದಿಸುವ ಮೂಲಕ ಎರಡನೇ ಸ್ಥಾನವನ್ನು ಪಡೆದಿದ್ದಾರೆ. 
1979ರ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ 916 ಅಂಕ ಪಡೆದಿದ್ದು ಭಾರತೀಯ ಆಟಗಾರನೊಬ್ಬ ಟೆಸ್ಟ್ ನಲ್ಲಿ ಅತೀ ಹೆಚ್ಚು ಅಂಕ ಪಡೆದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com