ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆತಿಥೇಯರನ್ನು ಭಾರತ ಮಣಿಸಿ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲೂ ಟೀಂ ಇಂಡಿಯಾ ನಂ. 1 ಪಟ್ಟಕ್ಕೇರುವ ಅವಕಾಶ ಹೊಂದಿದೆ. ಒಟ್ಟು ಆರು ಪಂದ್ಯಗಳ ಏಕದಿನ ಸರಣಿಗೆ ಗುರುವಾರ ಡರ್ಬನ್ ನಲ್ಲಿ ಚಾಲನೆ ಸಿಗಲಿದ್ದು, ಹಾಲಿ ಏಕದಿನ ರ‍್ಯಾಂಕಿಂಗ್ ನಲ್ಲಿ ದಕ್ಷಿಣ ಆಫ್ರಿಕಾ 120 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅಂತೆಯೇ ಭಾರತ ತಂಡ 119 ಅಂಕದೊಂದಿಗೆ 2ನೇ ಸ್ಥಾನದಲ್ಲಿದ್ದು, ಈ ಸರಣಿಯನ್ನು ಭಾರತ ಜಯಿಸಿದಕೆ ಭಾರತದ ಅಂಕಗಳಿಕೆ 120ಕ್ಕೆ ಏರಲಿದ್ದು, ಸರಣಿ ಸೋಲಿನಿಂದ ದಕ್ಷಿಣ ಆಫ್ರಿಕಾದ ಅಂಕಗಳಿಕೆ ಇಳಿಕೆಯಾಗಲಿದೆ ಎಂದು ಕ್ರಿಕೆಟ್ ತಜ್ಞರು ಅಂದಾಜಿಸಿದ್ದಾರೆ.