ಮೊದಲ ಟಿ20 ಪಂದ್ಯವನ್ನು ಗೆದ್ದ ಹುಮ್ಮಸ್ಸಿನಲ್ಲಿದ್ದ ಟೀಂ ಇಂಡಿಯಾಗೆ ಎರಡನೇ ಟಿ20 ಪಂದ್ಯದಲ್ಲಿ ಆಂಗ್ಲರು ತಿರುಗೇಟು ನೀಡಿದ್ದರು. ಎರಡನೇ ಪಂದ್ಯದಲ್ಲಿ ಟಾಪ್ ಆರ್ಡರ್ ಬ್ಯಾಟ್ಸ್ ಮನ್ ಗಳು ಕೈಕೊಟ್ಟಿದ್ದರಿಂದ ತಂಡ ಅಲ್ಪಮೊತ್ತಕ್ಕೆ ಆಲೌಟ್ ಆಗಿತ್ತು. ಇಂದಿನ ಪಂದ್ಯದಲ್ಲಿ ಟಾಪ್ ಆರ್ಡರ್ ಬ್ಯಾಟ್ಸ್ ಮನ್ ಗಳು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಬೇಕಿದೆ. ಆಂಗ್ಲರನ್ನು ಮಣಿಸಲು ಟೀಂ ಇಂಡಿಯಾ ಬೃಹತ್ ಮೊತ್ತದ ಗುರಿ ನೀಡಬೇಕಿದೆ. ಇನ್ನು ಸ್ಪಿನ್ನರ್ ಗಳು ಮೋಡಿ ಮಾಡಬೇಕಿದೆ.