ಆಸಿಸ್ ನೆಲದಲ್ಲಿ ಕೊಹ್ಲಿ ಶತಕ ಸಿಡಿಸಲು ಸಾಧ್ಯವೇ ಇಲ್ಲ: ವೇಗಿ ಪ್ಯಾಟ್ ಕಮ್ಮಿನ್ಸ್

ಆಸ್ಚ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಶತಕ ಸಿಡಿಸಲು ಸಾಧ್ಯವೇ ಇಲ್ಲ. ಅದಕ್ಕೆ ನಾವು ಅನುವು ಮಾಡಿಕೊಡುವುದಿಲ್ಲ ಎಂದು ಆಸಿಸ್ ತಂಡದ ವೇಗಿ ಪ್ಯಾಟ್ ಕಮ್ಮಿನ್ಸ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಸಿಡ್ನಿ: ಆಸ್ಚ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಶತಕ ಸಿಡಿಸಲು ಸಾಧ್ಯವೇ ಇಲ್ಲ. ಅದಕ್ಕೆ ನಾವು ಅನುವು ಮಾಡಿಕೊಡುವುದಿಲ್ಲ ಎಂದು ಆಸಿಸ್ ತಂಡದ ವೇಗಿ ಪ್ಯಾಟ್ ಕಮ್ಮಿನ್ಸ್ ಹೇಳಿದ್ದಾರೆ.
ಈ ಬಗ್ಗೆ ಕ್ರೀಡಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಆಸ್ಟ್ರೇಲಿಯಾ ತಂಡದ ವೇಗಿ ಪ್ಯಾಟ್ ಕಮ್ಮಿನ್ಸ್, ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಕ್ರಿಕೆಟಿಗರಲ್ಲಿ ಓರ್ವ. ಆದರೆ ಅವರು ಆಸಿಸ್ ನೆಲದಲ್ಲಿ ಶತಕ ಸಿಡಿಸಲು ನಾಲು ಅನುವು ಮಾಡಿಕೊಡುವುದಿಲ್ಲ. ಕೊಹ್ಲಿ ಮತ್ತು ತಂಡವನ್ನು ಹೇಗೆ ಕಟ್ಟಿಹಾಕಬೇಕು ಎಂಬುದು ನಮಗೆ ತಿಳಿದಿದೆ. ಖಂಡಿತಾ ವಿರಾಟ್ ಕೊಹ್ಲಿಯನ್ನು ನಾವು ಬೇಗನೆ ನಿಯಂತ್ರಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಆಸಿಸ್ ನೆಲದಲ್ಲಿ ವಿರಾಟ್ ಕೊಹ್ಲಿ ಒಟ್ಟು 8 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ಪೈಕಿ ಒಟ್ಟಾರೆ 62ರ ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದಾರೆ. ಇದು ಆಸಿಸ್ ನೆಲದಲ್ಲಿ ಭಾರತ ತಂಡದ ಬ್ಯಾಟ್ಸಮನ್ ಒಬ್ಬನ ಗರಿಷ್ಠ ಸರಾಸರಿ ಕೂಡ ಆಗಿದೆ. ಇದೇ ಕಾರಣಕ್ಕೆ ಕಾಂಗರೂಗಳು ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮತ್ತು ಆ ತಂಡದ ಸ್ಚಾರ್ ಬ್ಯಾಟ್ಸಮನ್ ಸ್ಟೀವೆನ್ ಸ್ಮಿತ್ ಮತ್ತು ಸ್ಫೋಟಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ನಿಷೇಧಕ್ಕೆ ಒಳಗಾಗಿ ತಂಡದಿಂದ ದೂರ ಉಳಿದಿದ್ದಾರೆ. ಹೀಗಾಗಿ ಆಸಿಸ್ ನೆಲದಲ್ಲಿ 4-0 ಅಂತರದಲ್ಲಿ ಸರಣಿ ಗೆಲಲ್ಲು ಟೀಂ ಇಂಡಿಯಾಗೆ ಸುವರ್ಣಾವಕಾಶವಿದೆ. ಇದೇ ಕಾರಣಕ್ಕೆ ಮುಂಬರುವ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸ ಕದನ ಕುತೂಹಲ ಕೆರಳಿಸಿದೆ. ಆಸಿಸ್ ನೆಲದಲ್ಲಿ ಭಾರತದ ಪ್ರದರ್ಶನ ಅಷ್ಟೇವೂ ಉತ್ತಮವಾಗಿಲ್ಲವಾದರೂ, ಪ್ರಸ್ತುತ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್ ನಲ್ಲಿದೆ. 
ಇದೇ ಪ್ರದರ್ಶನವನ್ನು ಆಸ್ಟ್ರೇಲಿಯಾದಲ್ಲೂ ಮುಂದುವರೆಸಿದರೆ ಐತಿಹಾಸಿಕ ಸರಣಿ ಜಯದ ಮೂಲಕ ಭಾರತ ತಂಡ ದಾಖಲೆ ನಿರ್ಮಾಣ ಮಾಡಲಿದೆ.
ಇದೇ ನವೆಂಬರ್ ತಿಂಗಳಿನಲ್ಲಿ ಭಾರತ ತಂಡ ಆಸ್ಚ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ 3 ಟಿ20 ಪಂದ್ಯಗಳು, 4 ಟೆಸ್ಟ್ ಪಂದ್ಯಗಳು ಮತ್ತು 3  ಏಕದಿನ ಪಂದ್ಯಗಳನ್ನಾಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com