ದುಬೈ: ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಲಂಕಾ ನಾಯಕ ದಿನೇಶ್ ಚಾಂಡಿಮಾಲ್, ಕೋಚ್ ಚಂಡಿಕಾ ಹತುರುಸಿಂಘೆ ಹಾಗೂ ಮ್ಯಾನೇಜರ್ ಅಸಂಕ ಗುರುಸಿನ್ಹಾ ಅವರಿಗೆ ನಾಲ್ಕು ಏಕದಿನ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯಗಳಿಗೆ ನಿಷೇಧ ಹೇರಲಾಗಿದೆ.