2018ನೇ ಸಾಲಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆಗೊಳಿಸಿದೆ. ಯುಎಇ ಆತಿಥ್ಯ ವಹಿಸುತ್ತಿರುವ 2018ರ ಏಷ್ಯಾ ಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಆಫ್ಘಾನಿಸ್ತಾನ ಸೇರಿದಂತೆ ಒಟ್ಟು ಆರು ತಂಡಗಳು ಭಾಗವಹಿಸುತ್ತಿದೆ. ಆರು ತಂಡಗಳನ್ನು ಒಟ್ಟು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ ಸೇರಿದಂತೆ ಕ್ವಾಲಿಫೈಯರ್ (ಇನ್ನಷ್ಟೇ ಅರ್ಹತೆ ಪಡೆಯಬೇಕಿದೆ) ತಂಡವೊಂದು ಇರಲಿದೆ. ಹಾಗೆಯೇ 'ಬಿ' ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನ ತಂಡಗಳು ಸ್ಥಾನ ಗಿಟ್ಟಿಸಿಕೊಂಡಿದೆ.