ಕ್ರಿಕೆಟ್

ವಿರಾಟ್ ಕೊಹ್ಲಿಗೆ ಇಂಗ್ಲೆಂಡ್ ನ ಪ್ರತಿಷ್ಠಿತ ಬಾರ್ಮಿ ಆರ್ಮಿ ಪ್ರಶಸ್ತಿ

ವಿರಾಟ್ ಕೊಹ್ಲಿಗೆ ಇಂಗ್ಲೆಂಡ್ ನ ಪ್ರತಿಷ್ಠಿತ ಬಾರ್ಮಿ ಆರ್ಮಿ ಪ್ರಶಸ್ತಿ
ವಿರಾಟ್ ಕೊಹ್ಲಿಗೆ ಇಂಗ್ಲೆಡ್ ನ ಪ್ರತಿಷ್ಠಿತ ಬಾರ್ಮಿ ಆರ್ಮಿ ಪ್ರಶಸ್ತಿ
Published On :
ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 2017-2018ರ ಸಾಲಿನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಇದೀಗ ಪ್ರತಿಷ್ಠಿತ ಬಾರ್ಮಿ ಆರ್ಮಿ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳ ಪ್ರಖ್ಯಾತ ಕ್ಲಬ್ ಆಗಿರುವ ಬಾರ್ಮಿ ಆರ್ಮಿ ಹಲವಾರು ವರ್ಷಗಳಿಂದಲೂ ಇಂಗ್ಲೆಂಡ್ ಆಟಗಾರರಿಗೆ ಸ್ಪೂರ್ತಿ ತುಂಬುತ್ತಾ ಬಂದಿದೆ. ಇಂತಹಾ ಮಹತ್ವದ ಕ್ಲಬ್ ಈಗ ಭಾರತ ಕ್ರಿಕೆಟ್ ತಂಡದ ನಾಯಕನನ್ನು ಗುರುತಿಸಿ ಗೌರವಿಸಿದೆ. 
ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕೊಹ್ಲಿ ಪ್ರಶಸ್ತಿಯೊಂದಿಗಿರುವ ಚಿತ್ರವನ್ನು ಹಂಚಿಕೊಂಡಿದೆ. ಹಾಗೆಯೇ  "ಬಾರ್ಮಿ ಆರ್ಮಿಯು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು 2017 ಮತ್ತು 2018ರ ಸಾಲಿನ ಇಂಟರ್ನ್ಯಾಷನಲ್ ಪ್ಲೇಯರ್ ಆಫ್ ದಿ ಇಯರ್  ಆಗಿ ಆಯ್ಕೆ ಮಾಡಿದೆ" ಎಂದು ಬರೆದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.