ಲಂಡನ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ನನಗೆ ಬಾರಿ ಆತ್ಮವಿಶ್ವಾಸವನ್ನು ನೀಡಿದೆ ಎಂದ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ಹೇಳಿದ್ದಾರೆ.
27 ವರ್ಷದ ಜೋಸ್ ಬಟ್ಲರ್ 18 ತಿಂಗಳ ಬಳಿಕ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳಿದ್ದು ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭರ್ಜರಿ 2 ಸಿಕ್ಸರ್ ಹಾಗೂ 11 ಬೌಂಡರಿ ನೆರವಿನಿಂದ 80 ರನ್ ಸಿಡಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಎರಡನೇ ಟೆಸ್ಟ್ ಪಂದ್ಯದ ನಂತರ ಮಾತನಾಡಿದ ಜೋಸ್ ಬಟ್ಲರ್ ನಾನು ಅತ್ಯುತ್ತಮ ಪ್ರದರ್ಶನ ನೀಡಲು ನನಗೆ ಐಪಿಎಲ್ ಹೆಚ್ಚು ನೆರವಾಗಿದೆ ಎಂದು ಹೇಳಿದ್ದಾರೆ.
ಐಪಿಎಲ್ ನಲ್ಲಿ ರಾಜಸ್ತಾನ ರಾಯಲ್ಸ್ ಪರ ಆಡಿದ್ದ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಅಲ್ಲದೆ ಬೌಲಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು. ಕಳೆದ ಐಪಿಎಲ್ ನಲ್ಲಿ ತಂಡ ಪ್ಲೇ ಆಫ್ ಹಂತಕ್ಕೆ ತಲುಪಿತ್ತು.