ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರವೀಣ್ ಸೂದ್ ಪುತ್ರಿ ಆಶಿತಾ ಸೂದ್ ಅವರೊಂದಿಗೆ ಕರ್ನಾಟಕ ಕ್ರಿಕೆಟ್ ತಂಡದ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್ ಸಪ್ತಪದಿ ತುಳಿದಿದ್ದಾರೆ...
ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರವೀಣ್ ಸೂದ್ ಪುತ್ರಿ ಆಶಿತಾ ಸೂದ್ ಅವರೊಂದಿಗೆ ಕರ್ನಾಟಕ ಕ್ರಿಕೆಟ್ ತಂಡದ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್ ಸಪ್ತಪದಿ ತುಳಿದಿದ್ದಾರೆ.
ಮಾಯಾಂಕ್ ಅಗರ್ವಾಲ್ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ವಿವಾಹದ ಫೋಟೋಗಳನ್ನು ಪ್ರಕಟಿಸಿದ್ದಾರೆ.
ಕಳೆದ ಜನವರಿಯಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಎರಡು ಕುಟುಂಬದ ಆಪ್ತರು ಮತ್ತು ಕೆಲ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನೇರವೇರಿತ್ತು.
ಕಳೆದ 7 ವರ್ಷಗಳಿಂದ ಮಾಯಾಂಕ್ ಮತ್ತು ಆಶಿತಾ ಸ್ನೇಹಿತರಾಗಿದ್ದರು. ಆಶಿತಾ ಇತ್ತೀಚೆಗಷ್ಟೇ ಲಂಡನ್ ನಲ್ಲಿ ಉನ್ನತ ಪದವಿ ಮುಗಿಸಿದ್ದಾರೆ.