ನವದೆಹಲಿ: ಸದಾ ಒಂದೊಲ್ಲೊಂದು ಟ್ವೀಟ್ ಮಾಡುವ ಮೂಲಕ ಸುದ್ದಿಯಾಗುವ ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಇದೀಗ ಅಪರೂಪದ ಟ್ವೀಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಅಂಧ ವ್ಯಕ್ತಿಯೋರ್ವರನ್ನು ಮಂಗವೊಂದು ರಸ್ತೆ ದಾಟಿಸುತ್ತಿರುವ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಸೆಹ್ವಾಗ್ ನಾವು ಎಲ್ಲರಿಗೂ ಸಹಾಯ ಮಾಡೋಕೆ ಆಗುವುದಿಲ್ಲ, ಆದರೆ ಕೆಲವರಿಗಂತೂ ಸಹಾಯ ಮಾಡಬಹುದು ಎಂದು ಟ್ವೀಟ್ ಮಾಡಿದ್ದಾರೆ.
ಸೆಹ್ವಾಗ್ ಯಾವ ವಿಚಾರಕ್ಕೆ ಸಂಬಂಧಿಸಿದಂತೆ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ. ಸದ್ಯ ಸೆಹ್ವಾಗ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.