ಐಸಿಸಿ ಟಿ20 ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರೆದ ರಷೀದ್ ಖಾನ್
ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಅಂತಾರಾಷ್ಟ್ರೀಯ ಟಿ20 ಬೌಲರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ ರಷೀದ್ ಖಾನ್ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಅಂತಾರಾಷ್ಟ್ರೀಯ ಟಿ20 ಬೌಲರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ ರಷೀದ್ ಖಾನ್ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.
ಈಗಷ್ಟೇ ಮುಕ್ತಾಯವಾದ ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ನಡುವಿನ ಟಿ20 ಸರಣಿಯಲ್ಲಿ ರಷೀದ್ ಖಾನ್ 12 ವಿಕೆಟ್ ಕಬಳಿಸುವ ಮೂಲಕ ತಮ್ಮ ಖಾತೆಗೆ ಮತ್ತೆ 53 ಅಂಕಗಳನ್ನು ಸೇರಿಸಿಕೊಳ್ಳುವ ಮೂಲಕ ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ಅಂಕಗಳ ಗಳಿಕೆಯನ್ನು 813ಕ್ಕೆ ಏರಿಕೆ ಮಾಡಿಕೊಂಡಿದ್ದಾರೆ. ಇನ್ನು 2ನೇ ಸ್ಥಾನದಲ್ಲಿರುವ ಪಾಕಿಸ್ತಾನದ ಶದಾಬ್ ಖಾನ್ 733 ಅಂಕಗಳನ್ನು ಗಳಿಸಿಕೊಂಡಿದ್ದಾರೆ.
ಇನ್ನು 706 ಅಂಕಗಳನ್ನು ಗಳಿಸಿಕೊಂಡಿರುವ ಭಾರತದ ಪ್ರಮುಖ ಸ್ಪಿನ್ನರ್ ಯಜುವೇಂದ್ರ ಚಾಹಲ್ ಮೂರನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ನ ಸೋಧಿ 4ನೇ ಸ್ಥಾನದಲ್ಲಿದ್ದಾರೆ.
ಭಾರತದ ಪರ ವೇಗಿ ಬುಮ್ರಾ 609 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದು, 562 ಅಂಕಗಳ ಗದಳಿಸಿರುವ ಭುವನೇಶ್ವರ್ ಕುಮಾರ್ 19 ಮತ್ತು 496 ಅಂಕಗಳಿಸಿರುವ ವಾಷಿಂಗ್ಟನ್ ಸುಂದರ್ 27ನೇ ಸ್ಥಾನದಲ್ಲಿದ್ದಾರೆ.