2019ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ವೇಳಾಪಟ್ಟಿ ಪ್ರಕಟ: ಟೀಂ ಇಂಡಿಯಾಗೆ ಮೊದಲ ಎದುರಾಳಿ ಕೆರಿಬಿಯನ್ನರು!

2019ರ ಜುಲೈನಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವೆಸ್ಟ್ ಇಂಡೀಸ್ ಟೀಂ ಇಂಡಿಯಾಗೆ ಮೊದಲ ಎದುರಾಳಿಯಾಗಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
ಹೈದರಾಬಾದ್: 2019ರ ಜುಲೈನಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವೆಸ್ಟ್ ಇಂಡೀಸ್ ಟೀಂ ಇಂಡಿಯಾಗೆ ಮೊದಲ ಎದುರಾಳಿಯಾಗಿದೆ. 
ಸರಣಿಯ ಉದ್ಘಾಟನಾ ಪಂದ್ಯದಲ್ಲಿ ಕೆರಿಬಿಯನ್ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ. ಈ ಟೂರ್ನಿ ಬಳಿಕ ಟೀಂ ಇಂಡಿಯಾ 2020ರ ಜೂನ್ ನಲ್ಲಿ ಶ್ರೀಲಂಕಾದಲ್ಲಿ ನಡೆಯಲಿರುವ 13 ದೇಶಗಳ ಏಕದಿನ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2018ರಿಂದ 2023ರವರೆಗೆ ನಡೆಯಲಿರುವ ಎಲ್ಲಾ ಮಾದರಿಯ ದ್ವಿಪಕ್ಷೀಯ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 
ಐಸಿಸಿ ಪ್ರಕಾರ 2019ರ ಜುಲೈ 15ರಿಂದ 2021 ಏಪ್ರಿಲ್ 30ರವರೆಗೆ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಐಸಿಸಿ ರ್ಯಾಂಕಿಂಗ್ ನಲ್ಲಿರುವ ಮೊದಲ 9 ತಂಡಗಳು ಪಾಲ್ಗೊಳ್ಳಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com