ಲಂಡನ್ ನಲ್ಲಿ ನಡೆದ ತ್ರಿಕೋನ ಟಿ20 ಸರಣಿಯ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಈ ದಾಖಲೆ ನಿರ್ಮಾಣ ಮಾಡಿದೆ. ಇಂಗ್ಲೆಂಡ್ ತಂಡದ ಈ ಬೃಹತ್ ಮೊತ್ತಕ್ಕೆ ಟಾಮಿ ಬಿಯೋಮಾಂಟ್ ನೆರವಾದರು. ಕೇವಲ 47 ಎಸೆತಗಳನ್ನು ಎದುರಿಸಿದ ಟಾಮಿ ಬಿಯೋಮಾಂಟ್ ಶತಕ ಸಿಡಿಸಿದರು. ಅವರ ಇನ್ನಿಂಗ್ಸ್ ನಲ್ಲಿ 18 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡಿತ್ತು. ಅವರಿಗೆ ಉತ್ತಮ ಸಾಥ್ ನೀಡಿದ ಕ್ಯಾಥೆರಿನ್ ಬ್ರಂಟ್ ಕೇವಲ 16 ಎಸೆತಗಳಲ್ಲಿ 3 ಬೌಂಡರಿ, ಒಂದು ಭರ್ಜರಿ ಸಿಕ್ಸರ್ ಸಹಿತ 42 ರನ್ ಬಾರಿಸಿದರು.