ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಿಮಿತ್ತ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಆಟಗಾರರ ತಂಡ ಇಂಗ್ಲೆಂಡ್ ಗೆ ತೆರಳಿದ್ದು, ಇಂಗ್ಲೆಂಡ್ ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ, ಬಲಿಷ್ಠ ತಂಡಗಳ ವಿರುದ್ಧ ಸೆಣಸುವುದು ನಮಗೆ ಇಷ್ಟ. ನಮ್ಮ ಸಾಮರ್ಥ್ಯವನ್ನು ಓರೆಗೆ ಹಚ್ಚಲು ಇಂಗ್ಲೆಂಡ್ ಪ್ರವಾಸದಲ್ಲಿ ಕಠಿಣ ಟೆಸ್ಟ್ ಪಂದ್ಯಗಳನ್ನು ಎದುರು ನೋಡುತ್ತಿದ್ದೇವೆ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಜ್ಜಾಗಿದ್ದೇವೆ ಎಂದು ಹೇಳಿದರು.