ಅರ್ಜುನ್ ತೆಂಡೂಲ್ಕರ್ ಅವರು ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದು ಜುಲೈನಲ್ಲಿ ಶ್ರೀಲಂಕಾ ಪ್ರವಾಸಕೈಗೊಳ್ಳಲಿದ್ದಾರೆ. ಇಂಗ್ಲೆಂಡ್ ನಲ್ಲಿ ತರಬೇತಿ ಪಡೆಯುತ್ತಿದ್ದ ಅರ್ಜುನ್ ತೆಂಡೂಲ್ಕರ್ ಅವರು ಸದ್ಯ ಸ್ವದೇಶಕ್ಕೆ ಹಿಂದಿರುಗಲಿದ್ದು ಡಬ್ಲ್ಯೂವಿ ರಾಮನ್ ಮತ್ತು ಸನತ್ ಕುಮಾರ್ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿದ್ದಾರೆ.