ಡಬ್ಲಿನ್: ಟೀಂ ಇಂಡಿಯಾ ಹಾಗೂ ಐರ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಡಬ್ಲಿನ್ ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತ ಭಾರತ ಬ್ಯಾಟಿಂಗ್ ಆರಂಭಿಸಲಿದೆ. ಇನ್ನು ಮೊದಲ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲಿ ಆಡಲಿದ್ದಾರೆ. ತಂಡದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಶಿಖರ್ ಧವನ್, ಎಂಎಸ್ ಧೋನಿ, ಜಸ್ ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಗೆ ವಿಶ್ರಾಂತಿ ನೀಡಲಾಗಿದೆ.
ಈ ಪಂದ್ಯದ ಮೂಲಕ ಬೌಲರ್ ಸಿದ್ಧಾರ್ಥ್ ಕೌಲ್ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.