ಕ್ರಿಕೆಟ್

ಹಾರ್ದಿಕ್ ಪಾಂಡ್ಯಗೆ ಹೊಸ ಚಿಯರ್ ಲೀಡರ್ 'ಝೀವಾ ಧೋನಿ'!

ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದ ಕೊನೆಯ ಎರಡು ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಟೀಂ ಇಂಡಿಯಾದ...

ಹಾರ್ದಿಕ್ ಪಾಂಡ್ಯಗೆ ಹೊಸ ಚಿಯರ್ ಲೀಡರ್ 'ಝೀವಾ ಧೋನಿ'!
ಹಾರ್ದಿಕ್ ಪಾಂಡ್ಯ-ಝೀವಾ ಧೋನಿ
Published On :
ಮುಂಬೈ: ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದ ಕೊನೆಯ ಎರಡು ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮಗಳು ಪಂದ್ಯ ನಡೆಯುವ ವೇಳೆ ಚಿಯರ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. 
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ವೇಳೆ ಧೋನಿ ಜೊತೆಗಿದ್ದ ಝೀವಾ ತಮ್ಮ ತೊದಲು ನುಡಿಯ ಮಾತು, ನೃತ್ಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಿಂಚಿದ್ದಳು. ಇದೀಗ ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಕೊನೆಯ ಎರಡು ಓವರ್ ಗಳಲ್ಲಿ ಬ್ಯಾಟಿಂಗ್ ಇಳಿದ ಆಲ್ರೌಂಡರ್ ಗೆ ಚಿಯರ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಈ ವಿಡಿಯೋದಲ್ಲಿ ಟಿವಿ ನೋಡುತ್ತಿರುವ ಝೀವಾ ಕಮ್ ಆನ್ ಹಾರ್ದಿಕ್, ಕಮ್ ಆನ್ ಎಂದು ಚಿಯರ್ ಮಾಡುತ್ತಿದ್ದಾಳೆ. ಇದನ್ನು ಸ್ವತಃ ಹಾರ್ದಿಕ್ ಅವರೇ ತಮ್ಮ ಇನ್ಸ್ಟಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು ಇಲ್ಲಿಯವರೆಗೂ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.