ಭಾರತ ಜೂನಿಯರ್ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ರಾಜಿನಾಮೆ

ಭಾರತ ಜೂನಿಯರ್ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ರಾಜಿನಾಮೆ ನೀಡಿದ್ದಾರೆ...
ವೆಂಕಟೇಶ್ ಪ್ರಸಾದ್
ವೆಂಕಟೇಶ್ ಪ್ರಸಾದ್
ನವದೆಹಲಿ: ಭಾರತ ಜೂನಿಯರ್ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ರಾಜಿನಾಮೆ ನೀಡಿದ್ದಾರೆ. 
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ ಒಂದು ತಿಂಗಳಲ್ಲೇ ವೆಂಕಟೇಶ್ ಪ್ರಸಾದ್ ರಾಜಿನಾಮೆ ನೀಡಿದ್ದಾರೆ. 
ವೆಂಕಟೇಶ್ ಪ್ರಸಾದ್ 30 ತಿಂಗಳ ಕಾಲ ಭಾರತ ಜೂನಿಯರ್ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ತಮ್ಮ ಮತ್ತು ಬಿಸಿಸಿಐ ನಡುವಿನ ಶೀತಲ ಸಮರವನ್ನು ವೆಂಕಟೇಶ್ ಪ್ರಸಾದ್ ಹಂಚಿಕೊಂಡಿದ್ದರು. 
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಹೊಸ ನಿಯಾಮಾವಳಿ ಅನ್ವಯ ಭಾರತೀಯ ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿಗಲು ಎರಡೇರಡು ಹುದ್ದೆಗಳನ್ನು ಹೊಂದಿರಬಾರದು ಎಂಬ ನಿಯಮವಿದೆ ಈ ಹಿನ್ನೆಲೆಯಲ್ಲಿ ವೆಂಕಟೇಶ್ ಪ್ರಸಾದ್ ಅವರು ಆಯ್ಕೆ ಸಮಿತಿ ಮುಖ್ಯಸ್ಥರ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ವೆಂಕಟೇಶ್ ಪ್ರಸಾದ್ ಅವರು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡವನ್ನು ಸೇರುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.  
ಟೀಂ ಇಂಡಿಯಾ ಪರವಾಗಿ ಆಡಿರುವ ವೆಂಕಟೇಶ್ ಪ್ರಸಾದ್ 33 ಟೆಸ್ಟ್ ಪಂದ್ಯಗಳನ್ನು ಆಡಿದ್ದು 96 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 161 ಏಕದಿನ ಪಂದ್ಯಗಳಲ್ಲಿ 196 ವಿಕೆಟ್ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com