ಕ್ರಿಕೆಟ್

ಟಿ20: ಧವನ್ 90, ಲಂಕಾ ಗೆಲುವಿಗೆ 175 ರನ್ ಗಳ ಟಾರ್ಗೆಟ್ ನೀಡಿದ ಟೀಂ ಇಂಡಿಯಾ

ಟಿ20: ಧವನ್ 90, ಲಂಕಾ ಗೆಲುವಿಗೆ 175 ರನ್ ಗಳ ಟಾರ್ಗೆಟ್ ನೀಡಿದ ಟೀಂ ಇಂಡಿಯಾ
ಶಿಖರ್ ಧವನ್
Published On :
ಕೊಲಂಬೊ: ನಿಡಹಾಸ್ ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧಆರಂಭಿಕ ಆಟಗಾರ ಶಿಖರ್ ಧವನ್ ಅವರ ಭರ್ಜರಿ ಅರ್ಧಶತಕದ(90) ನೆರವಿನಿಂದ ಟೀಂ ಇಂಡಿಯಾ ಲಂಕಾ ಗೆಲುವಿಗೆ 175 ರನ್ ಗಳ ಟಾರ್ಗೆಟ್ ನೀಡಿದೆ.
ಕೊಲಂಬೊದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 174 ರನ್‌ಗಳ ಬೃಹತ್ ಮೊತ್ತ ಸೇರಿಸಿದೆ.
ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ದಕೊಂಡಿತ್ತು. ಭಾರತಕ್ಕೆ ಆರಂಭದಲ್ಲೇ ನಾಯಕನ ರೂಪದಲ್ಲಿ ರೋಹಿತ್ ಶರ್ಮಾ (0) ವಿಕೆಟ್ ನಷ್ಟವಾಯಿತು. ಅನುಭವಿ ಸುರೇಶ್ ರೈನಾ ಸಹ (1) ಹೆಚ್ಚು ಹೊತ್ತು ನಿಲ್ಲಲಿಲ್ಲ. ಇದರೊಂದಿಗೆ 9 ರನ್ ಗಳಿಸುವುದರೆಡೆಗೆ ಪ್ರಮುಖ ಎರಡು ವಿಕೆಟುಗಳನ್ನು ಕಳೆದುಕೊಂಡಿತು.
ಈ ಹಂತದಲ್ಲಿ ಜತೆಗೂಡಿದ ಉಪನಾಯಕ ಶಿಖರ್ ಧವನ್ ಹಾಗೂ ಕನ್ನಡಿಗ ಮನೀಷ್ ಪಾಂಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.
ಯಂಗ್ ಇಂಡಿಯಾ ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಯುವ ಪಡೆಯೊಂದಿಗೆ ಲಂಕಾಗೆ ತೆರಳಿತ್ತು. ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಭಾರತ ನಡುವೆ ತ್ರಿಕೋನ ಟಿ20 ಸರಣಿ ನಡೆಯುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.