ನಿಡಹಾಸ್ ಟಿ20 ಸರಣಿ: ಭಾರತ ವಿರುದ್ಧ ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ

ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಬಾಂಗ್ಲಾದೇಶ
ಟಾಸ್ ಗೆದ್ದ ಬಾಂಗ್ಲಾದೇಶ
Updated on: 
ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ಆಗ್ರಸ್ಥಾನಕ್ಕೇರಲು ಉಭಯ ತಂಡಗಳಿಗೆ ಇದು ಪ್ರಮುಖ ಪಂದ್ಯವಾಗಿದ್ದು, ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡಕ್ಕೆ ಆರಂಭಿಕರಾದ ಶಿಖರ್ ಧವನ್ ಮತ್ತು ನಾಯಕ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಭಾರತ ತಂಡ 9 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 67 ರನ್ ಗಳಿಸಿತ್ತು. 31 ರನ್ ಗಳಿಸಿರುವ ರೋಹಿತ್ ಶರ್ಮಾ ಹಾಗೂ 32 ರನ್ ಗಳಿಸಿರುವ ಶಿಖರ್ ಧವನ್ ಕ್ರೀಸ್ ಕಾಯ್ದುಕೊಂಡಿದ್ದಾರೆ.
ತಂಡಗಳು ಇಂತಿವೆ
ಭಾರತ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಲೋಕೇಶ್ ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವಿಜಯ್ ಶಂಕರ್, ವಾಷಿಂಗ್ಟನ್ ಸುಂದರ್, ಶರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್
ಬಾಂಗ್ಲಾದೇಶ
ತಮೀಮ್ ಇಕ್ಬಾಲ್, ಸೌಮ್ಯ ಸರ್ಕಾರ್, ಲಿತನ್ ದಾಸ್, ಮುಷ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮದುಲ್ಲಾ (ನಾಯಕ), ಶಬ್ಬೀರ್ ರಹಮಾನ್, ಮೆಹಿದ್ ಹಸನ್, ರುಬೆಲ್ ಹುಸೇನ್, ಅಬು ಹೆದರ್ ರೋನಿ, ಮುಸ್ತಾಫಿಜುರ್ ರಹಮಾನ್, ನಜ್ಮುಲ್ ಇಸ್ಲಾಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com