ನಿಡಹಾಸ್ ಟ್ರೋಫಿ ಫೈನಲ್: ಭಾರತ ಗೆಲ್ಲಲು 167 ರನ್ ಗಳ ಗುರಿ ನೀಡಿದ ಬಾಂಗ್ಲಾ

ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ತಂಡ ಭಾರತಕ್ಕೆ ಗೆಲ್ಲಲು 167 ರನ್ ಗಳ ಸವಾಲಿನ ಗುರಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ತಂಡ ಭಾರತಕ್ಕೆ ಗೆಲ್ಲಲು 167 ರನ್ ಗಳ ಸವಾಲಿನ ಗುರಿ ನೀಡಿದೆ.
ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ಪಡೆದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಬಾಂಗ್ಲಾದೇಶಕ್ಕೆ ಸಬ್ಬೀರ್ ರೆಹಮಾನ್ ಅವರ ಏಕಾಂಗಿ ಹೋರಾಟ ಬಾಂಗ್ಲಾದೇಶ 150ರ ಗಡಿ ದಾಟಲು ನೆರವಾಯಿತು. ಮಧ್ಯಮ ಕ್ರಮಾಂಕದ ಆಟಗಾರ ಮಹಮದುಲ್ಲಾ ಸಬ್ಬೀರ್ ಗೆ ಉತ್ತಮ ಸಾಥ್ ನೀಡುವ ಪ್ರಯತ್ನ ಮಾಡಿದರಾದರೂ 21 ರನ್ ಗಳಿಸಿದ್ದ ವೇಳೆ ರನೌಟ್ ಗೆ ಬಲಿಯಾದರು. 
19ನೇ ಓವರ್ ನಲ್ಲಿ ಸಬ್ಬೀರ್ ರೆಹಮಾನ್ ಕೂಡ ಉನಾದ್ಕತ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಇವರ ಬೆನ್ನಲ್ಲೇ ರುಬೆಲ್ ಹುಸೇನ್ ಕೂಡ ಬೋಲ್ಡ್ ಆದರು.
ಇನ್ನು ಭಾರತದ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಸ್ಪಿನ್ನರ್ ಯಜುವೇಂದ್ರ ಚಾಹಲ್ 3 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಅಂತೆಯೇ ಉನಾದ್ಕತ್ 2 ಮತ್ತು ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com