ಐರ್ಲೆಂಡ್ ವಿರುದ್ಧ ರೋಚಕ ಜಯ ಗಳಿಸಿ 2019ರ ವಿಶ್ವಕಪ್ ಗೆ ಅರ್ಹತೆ ಪಡೆದ ಅಫ್ಘಾನಿಸ್ತಾನ್

2019ರ ವಿಶ್ವಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಅಫ್ಘಾನಿಸ್ತಾನ್, ಐರ್ಲೆಂಡ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ...
ಅಸ್ಘರ್ ಸ್ಟಾನಿಕ್ ಝೈಅಸ್ಘರ್ ಸ್ಟಾನಿಕ್ ಝೈ
ಅಸ್ಘರ್ ಸ್ಟಾನಿಕ್ ಝೈಅಸ್ಘರ್ ಸ್ಟಾನಿಕ್ ಝೈ
ಹರಾರೆ: 2019ರ ವಿಶ್ವಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಅಫ್ಘಾನಿಸ್ತಾನ್,  ಐರ್ಲೆಂಡ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂದಿನ ವರ್ಷ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಅರ್ಹತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಇಂದು ಹರಾರೆ ಸ್ಪೋರ್ಟ್ಸ್ ಕ್ಲಬ್​ ನಲ್ಲಿ ನಡೆದ ನಿರ್ಣಾಯಕ ಸೂಪರ್ ಸಿಕ್ಸ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್, ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 209ರ್ ಗಳಿಸಿ, ಅಫ್ಘಾನಿಸ್ತಾನ್ ಗೆಲ್ಲಲು 210ರನ್ ಗಳ ಟಾರ್ಗೆಟ್ ನೀಡಿತ್ತು.
210ರನ್ ಗಳ ಗುರಿ ಬೆನ್ನತ್ತಿದ ಅಫ್ಘಾನ್, ನಾಯಕ ಅಸ್ಘರ್ ಸ್ಟಾನಿಕ್ ಝೈ(ಔಟಾಗದೆ 39) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 49.1 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 213ರನ್ ಗಳಿಸಿ ರೋಚಕ ಗೆಲುವು ಸಾಧಿಸಿತು. ಮೂಲಕ ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ನಡೆಯುವ ವಿಶ್ವಕಪ್ ಗೆ 10ನೇ ತಂಡವಾಗಿ ಸ್ಥಾನ ಪಡೆದಿದೆ.
ಆರಂಭದಲ್ಲಿ ಅರ್ಹತಾ ಸುತ್ತಿನ ಮೂರು ಪಂದ್ಯಗಳಲ್ಲೂ ಸೋತಿದ್ದ ಅಫ್ಘಾನ್ ನಂತರ ಸತತ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.
ಗಾಯದಿಂದ ಬಳಲುತ್ತಿರುವ ಅಸ್ಘರ್ ಮೈದಾನದಲ್ಲೇ ಚಿಕಿತ್ಸೆ ಪಡೆದುಕೊಂಡು ಆಟವಾಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com