ಕಾರು ಅಪಘಾತ: ಭಾರತೀಯ ಕ್ರಿಕೆಟಿಗ ಮೊಹ್ಮಮದ್ ಶಮಿ ತಲೆಗೆ ಗಾಯ

ಕಾರು ಅಪಘಾತವೊಂದರಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರು ಗಾಯಗೊಂಡಿದ್ದಾರೆಂದು ವರದಿಗಳು ಭಾನುವಾರ ತಿಳಿಸಿವೆ...
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
Updated on: 
ಡೆಹ್ರಾಡೂನ್; ಕಾರು ಅಪಘಾತವೊಂದರಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರು ಗಾಯಗೊಂಡಿದ್ದಾರೆಂದು ವರದಿಗಳು ಭಾನುವಾರ ತಿಳಿಸಿವೆ. 
ಶಮಿ ಅವರು ಡೆಹ್ರಾಡೂನ್ ನಿಂದ ದೆಹಲಿಗೆರ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಶಮಿ ಅವರ ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ. 
ಅಪಘಾತ ಸಂಭವಿಸಿದ ಬಳಿಕ ಶಮಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತಲೆಗೆ ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿಗಳು ತಿಳಿಸಿವೆ. 
ಮೊಹಮ್ಮದ್ ಶಮಿ ವಿರುದ್ಧ ಅವರ ಪತ್ನಿ ಹಸೀನ್ ಜಹಾನ್ ಅವರು ಅನೈತಿಕ ಸಂಬಂಧ, ಕಿರುಕುಳ ಹಾಗೂ ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದರು. ಆದರೆ, ಈ ಎಲ್ಲಾ ಆರೋಪಗಳನ್ನು ಶಮಿ ಅವರು ತಳ್ಳಿ ಹಾಕಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com