ಯುವಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡ್ರೆ, ಕೆಎಲ್ ರಾಹುಲ್‌ರನ್ನು ಕ್ಷಮೆ ಕೇಳಿದ್ದು ಯಾಕೆ?

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ಆರಂಭವಾಗುತ್ತಿದ್ದಂತೆ ಆಟಗಾರರು ವಿಭಿನ್ನ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳಲು ತಯಾರಾಗುತ್ತಿದ್ದಾರೆ...
ಕೆಎಲ್ ರಾಹುಲ್-ಯುವರಾಜ್ ಸಿಂಗ್
ಕೆಎಲ್ ರಾಹುಲ್-ಯುವರಾಜ್ ಸಿಂಗ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ಆರಂಭವಾಗುತ್ತಿದ್ದಂತೆ ಆಟಗಾರರು ವಿಭಿನ್ನ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳಲು ತಯಾರಾಗುತ್ತಿದ್ದಾರೆ. 
ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. 
ಯುವಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡ ನಂತರ ತನ್ನ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪಬ್ಲಿಷ್ ಮಾಡಿದ್ದಾರೆ. ಇದರ ಜತೆಗೆ ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರನ್ನು ತಮಾಷೆಯಾಗಿ ಕ್ಷಮೆ ಕೋರಿದ್ದಾರೆ.
ಯುವಿ ಕೆಎಲ್ ರಾಹುಲ್ ಕ್ಷಮೆ ಕೇಳಲು ಕಾರಣ ರಾಹುಲ್ ಶೈಲಿಯ ಹೇರ್ ಕಟ್ ಮಾಡಿರುವುದು. 2018ರ ಐಪಿಎಲ್ ನಲ್ಲಿ ಯುವಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದು ಅದಾಗಲೇ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com