ಚೆಂಡು ವಿರೂಪಗೊಳಿಸಿದ ಪ್ರಕರಣವನ್ನು ತನಿಖೆಗೆ ಒಳಪಡಿಸಲು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ (ಸಿಎ) ನಿರ್ಧರಿಸಿದ್ದು, ಸಿಎ ಸೌಹಾರ್ದ ಘಟಕದ ಮುಖ್ಯಸ್ಥ ಇಯಾನ್ ರಾಯ್ ಮತ್ತು ಹೈ ಪರ್ಫಾರ್ಮೆನ್ಸ್ ವ್ಯವಸ್ಥಾಪಕ ಪ್ಯಾಟ್ ಹೊವಾರ್ಡ್ ಅವರನ್ನು ತನಿಖಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅವರು ಸೋಮವಾರ ಕೇಪ್‌ಟೌನ್ ತಲುಪಿದ್ದು, ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಆಟಗಾರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಂತೆಯೇ ಅಧಿಕಾರಿಗಳು ನಾಲ್ಕನೇ ಟೆಸ್ಟ್‌ಗಾಗಿ ತಂಡ ಜೊಹಾನ್ಸ್‌ಬರ್ಗ್‌ಗೆ ತೆರಳುವ ಮುನ್ನ ಮಾಹಿತಿ ಕಲೆ ಹಾಕಲಿದ್ದು, ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾಗೆ ತಮ್ಮ ವರದಿ ನೀಡಿದ್ದಾರೆ ಎನ್ನಲಾಗಿದೆ.