'ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಾನು ಮತ್ತು ನನ್ನ ಮಗಳು ಅವರನ್ನು ಭೇಟಿ ಮಾಡಲು ತುದಿಗಾಲಲ್ಲಿ ನಿಂತಿದ್ದೇವೆ. ಆದರೆ, ನಾವು ಕರೆ ಮಾಡಿದರೆ ಅವರು ಯಾವುದೇ ಉತ್ತರ ನೀಡುತ್ತಿಲ್ಲ. ಅಲ್ಲದೆ, ಅವರ ಕುಟುಂಬದವರು ಕೂಡ ಅವರಿರುವ ಸ್ಥಳದ ಬಗ್ಗೆ ಮಾಹಿತಿ ನೀಡುತ್ತಿಲ್ಲ. ನಾನು ಅಸಹಾಯಕಳಾಗಿದ್ದೇನೆ ಎಂದು ಹಸೀನ್ ಜಹಾನ್ ತಮ್ಮ ಅಳಲು ತೋಡಿಕೊಂಡಿದ್ದಾರೆ.