ಐಪಿಎಲ್ ನಿಂದಲೂ ಸ್ಟೀವ್ ಸ್ಮಿತ್, ವಾರ್ನರ್ ಗೆ ನಿಷೇಧ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್
ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್
Updated on: 
ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತವರಿನಲ್ಲಿ ಒಂದು ವರ್ಷ ನಿಷೇಧಕ್ಕೆ ಒಳಗಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಹಾಗೂ ಮಾಜಿ ಉಪ ನಾಯಕ ಡೇವಿಡ್ ವಾರ್ನರ್ ಗೆ 2018ರ ಐಪಿಎಲ್ ನಿಂದಲೂ ಗೇಟ್ ಪಾಸ್ ನೀಡಲಾಗಿದೆ.
ಸ್ಮಿತ್ ಹಾಗೂ ವಾರ್ನರ್ ಇಬ್ಬರೂ ಆಟಗಾರರನ್ನು ಈ ವರ್ಷದ ಐಪಿಎಲ್ ನಿಂದ ಉಚ್ಚಾಟಿಸಲಾಗಿದೆ. ಈಗಾಗಲೇ ಸ್ಮಿತ್ ಮತ್ತು ವಾರ್ನರ್ ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳ ನಾಯಕತ್ವದಿಂದ ತೆಗೆದು ಹಾಕಲಾಗಿದೆ. 
ಕೇಪ್ ಟೌನ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಕ್ರಿಕೆಟಿಗ ಕ್ಯಾಮರಾನ್ ಬೆನ್ ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್, ನಾಯಕತ್ವ ಬಳಗದ ಅರಿವಿನೊಂದಿಗೆ ಬಾಲ್ ಟ್ಯಾಂಪರಿಂಗ್ ನಡೆಸಲಾಗಿತ್ತು ಎಂದು ತಪ್ಪೊಪ್ಪಿಕೊಂಡಿದ್ದರು. 
ಇದಾದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ತತ್ ಕ್ಷಣದಿಂದಲೇ ನಾಯಕ ಹಾಗೂ ಉಪನಾಯಕ ಸ್ಥಾನಗಳಿಂದ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅವರನ್ನು ಕೆಳಗಿಸಿದ್ದಲ್ಲದೆ ಒಂದು ವರ್ಷ ನಿಷೇಧ ಹೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com