ಓರ್ವ ಬ್ಯಾಟ್ಸ್‌ಮನ್‌ ಆಗಿ ಸ್ಟೀವ್ ಸ್ಮಿತ್ ರನ್ನು ಈಗಲು ನಾನು ಗೌರವಿಸುತ್ತೇನೆ: ಅಜಿಂಕ್ಯ ರಹಾನೆ

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾದಿಂದ ನಿಷೇಧಗೊಂಡಿರುವ ಸ್ಟೀವ್ ಸ್ಮಿತ್ ಅವರನ್ನು...
ರಹಾನೆ-ಸ್ಟೀವ್ ಸ್ಮಿತ್
ರಹಾನೆ-ಸ್ಟೀವ್ ಸ್ಮಿತ್
ಜೈಪುರ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾದಿಂದ ನಿಷೇಧಗೊಂಡಿರುವ ಸ್ಟೀವ್ ಸ್ಮಿತ್ ಅವರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಈಗಲು ನಾನು ಗೌರವಿಸುತ್ತೇನೆ ಎಂದು ರಾಜಸ್ತಾನ ರಾಯಲ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ. 
ಚೆಂಡು ವಿರೂಪ ಪ್ರಕರಣದಿಂದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ರಾಜಸ್ತಾನ ರಾಯಲ್ಸ್ ತಂಡದಿಂದ ಹೊರ ಹೋಗಿದ್ದು ಈ ಹಿನ್ನೆಲೆಯಲ್ಲಿ ಅಜಿಂಕ್ಯ ರಹಾನೆ ತಂಡಕ್ಕೆ ನಾಯಕರಾಗಿ ಆಯ್ಕೆಯಾಗಿದ್ದಾರೆ. 
ಸಂಭವಿಸಬೇಕಾದದ್ದು ಈಗಾಗಲೇ ಸಂಭವಿಸಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಐಸಿಸಿ ಸ್ಟೀವ್ ಸ್ಮಿತ್ ಮೇಲೆ ಹೇರಿರುವ ದಂಡದ ಕುರಿತು ನಾನು ಕಾಮೆಂಟ್ ಮಾಡಲು ಬಯಸುವುದಿಲ್ಲ. ಆದರೆ ಅವರ ಬ್ಯಾಟಿಂಗ್ ದಾಖಲೆಯನ್ನು ನಾವು ಗೌರವಿಸಬೇಕು.  ಓರ್ವ ಬ್ಯಾಟ್ಸ್ ಮನ್ ಮತ್ತು ಆಟಗಾರನಾಗಿ ಅವರನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. 
ಸ್ಟೀವ್ ಸ್ಮಿತ್ ತಂಡದಿಂದ ಹೊರಹೋಗಿದ್ದು ತಂಡದ ನಾಯಕನಾಗಿರುವ ನನ್ನ ಹೆಗಲ ಮೇಲೆ ದೊಡ್ಡ ಜವಾಬ್ದಾರಿ ಇದೆ. ಹೌದು ನಾವು ಅವರನ್ನು ಕಳೆದುಕೊಂಡಿದ್ದೇವೆ. ಆದರೆ ಅವರ ಬದಲಿಗೆ ನಮ್ಮ ತಂಡವನ್ನು ಹೇನ್ರಿಚ್ ಕಾಲ್ಸೆನ್ ಸೇರಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com