2019ರ ಬಳಿಕ ಕ್ರಿಕೆಟಿಗ ಯುವರಾಜ್ ಸಿಂಗ್ ನಿವೃತ್ತಿ!

ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿರುವ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ 2019ರ ಬಳಿಕ ತಾವು ನಿವೃತ್ತಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿರುವ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ 2019ರ ಬಳಿಕ ತಾವು ನಿವೃತ್ತಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಪ್ರಸ್ತುತ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಪರ ಆಡುತ್ತಿರುವ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ನಿರ್ಧಾರದ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಯುವಿ, 2019ರ ಬಳಿಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. 
'ಮುಂದಿನ ವರ್ಷ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿರುವ ವಿಶ್ವ ಕಪ್ ಕ್ರಿಕೆಟ್ ನಂತರ ನಿವೃತ್ತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಎರಡು ದಶಕಗಳಿಂದ ದೇಶಕ್ಕಾಗಿ ಆಡಿದ್ದು ಈಗ ಯಾವುದಾದರೊಂದು ದಿನ ತಾವು ನಿವೃತ್ತಿ ಹೊಂದಲೇಬೇಕು. ವಿಶ್ವ ಕಪ್ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಪ್ರಸ್ತುತ ನಡೆಯುತ್ತಿರುವ ಹನ್ನೊಂದನೆ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸೆಮಿಫೈನಲ್ ಕೊಂಡೊಯ್ಯುವುದೇ ತಕ್ಷಣಕ್ಕೆ ನನ್ನ ಮುಂದೆ ಇರುವ ಗುರಿ. ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಪಂಜಾಬ್ ಅತ್ಯಂತ ಬಲಿಷ್ಠವಾಗಿದ್ದು, ಈ ಹಿನ್ನೆಲೆಯಲ್ಲಿ ಸೆಮಿಫೈನಲ್ ತಲುಪುವ ವಿಶ್ವಾಸವಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
ಇದೇ ವೇಳೆ ಕ್ರಿಸ್ ಗೇಯ್ಲ್ ಕುರಿತು ಮಾತನಾಡಿದ ಯುವಿ, ಕ್ರಿಸ್ ಗೇಲ್ ತಮಗೆ ಒಳ್ಳೆಯ ಸ್ನೇಹಿತರಾಗಿದ್ದಾರೆ. ಆತನೊಬ್ಬ ಉತ್ತಮ ಬ್ಯಾಟ್ಸಮನ್ ಎಂಬುದರಲ್ಲಿ ಎರಡು ಮಾತಿಲ್ಲ. ವಿಶ್ವದಲ್ಲೇ ಅಷ್ಟೇ ಅಪಾಯಕಾರಿ ಆಟಗಾರ. ಆತನ ಬ್ಯಾಟಿಂಗ್ ಶೈಲಿಯ ಬಗ್ಗೆ ಸಂತಸವಿದೆ.  ಟಿ-20 ಕ್ರಿಕೆಟ್ ನಲ್ಲಿ ಏನನ್ನೂ ಹೇಳಲು ಆಗುವುದಿಲ್ಲ. ಒಂದಲ್ಲಾ ಒಂದು ದಿನ ಯಾವ ತಂಡವಾದರೂ ಗೆಲುವು ಸಾಧಿಸಬಹುದು. ಚೆನ್ನೈ ಸೂಪರ್ ಕಿಂಗ್ ಅತ್ಯಂತ ಸಮತೋಲನದಿಂದ ಕೂಡಿದೆ. ಕೊಲ್ಕತಾ ನೈಟ್ ರೈಡರ್ಸ್ ತಂಡವು ಉತ್ತಮ ಪ್ರದರ್ಶನ ನೀಡುತ್ತಿದೆ. ಈ ಎರಡೂ ತಂಡಗಳು ಐಪಿ‌ಎಲ್‌ನಲ್ಲಿ ಬಲಿಷ್ಠವಾಗಿದೆ ಎಂದು ಹೇಳಿದರು. 
2017 ಜೂನ್ ನಲ್ಲಿ ಭಾರತದ ಪರ ಕೊನೆಯ ಏಕ ದಿನ ಪಂದ್ಯ ವಾಡಿದ್ದರು. ಅಂದಿನಿಂದ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿರುವ ಯುವರಾಜ್, ಈಗ ನಿವೃತ್ತಿಯ ಬಗ್ಗೆ ಚಿಂತನೆ ನಡೆಸಿದ್ದಾರೆ.  ಇನ್ನು ಯುವಿ ಪ್ರತಿನಿಧಿಸುತ್ತಿರುವ ಪಂಜಾಬ್ ತಂಡ ಒಂದು ಪಂದ್ಯದಲ್ಲಿ ಸೋತಿದ್ದು ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com