ಐಪಿಎಲ್ 2018: ಅತೀ ಹೆಚ್ಚು ಸಿಕ್ಸರ್ ಕ್ರಿಸ್ ಗೇಯ್ಲ್ ಹಿಂದಿಕ್ಕಿದ ಎಂಎಸ್ ಧೋನಿ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ...
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಈಡೆನ್ ಗಾರ್ಡೆನ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಧೋನಿ ನಾಲ್ಕು ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅವರನ್ನು ಹಿಂದಿಕ್ಕಿದ್ದಾರೆ.