ಡೆಲ್ಲಿ ತಂಡವನ್ನು ಮಣಿಸಿದ ಸನ್ ರೈಸರ್ಸ್ ಹೈದರಾಬಾದ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ಗಳಿಂದ ಜಯ ಗಳಿಸಿದೆ...
ಸನ್ ರೈಸರ್ಸ್ ಹೈದರಾಬಾದ್
ಸನ್ ರೈಸರ್ಸ್ ಹೈದರಾಬಾದ್
ಹೈದರಾಬಾದ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ಗಳಿಂದ ಜಯ ಗಳಿಸಿದೆ. 
ಹೈದರಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್ ಡೇವಿಲ್ಸ್ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 163 ರನ್ ಪೇರಿಸಿತು. 
ಡೆಲ್ಲಿ ನೀಡಿದ 164 ರನ್ ಗಳ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 3 ವಿಕೆಟ್ ನಷ್ಟಕ್ಕೆ 164 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 
ಡೆಲ್ಲಿ ಪರ ಪೃಥ್ವಿ ಶಾ 65, ಶ್ರೇಯಸ್ ಅಯ್ಯರ್ 44 ವಿಜಯ್ ಶಂಕರ್ 23 ರನ್ ಬಾರಿಸಿದ್ದಾರೆ. 
ಹೈದರಾಬಾದ್ ಪರ ಹಾಲೆಸ್ 45, ಶಿಖರ್ ಧವನ್ 33, ಕೇನ್ ವಿಲಿಯಮ್ಸನ್ 32 ರನ್ ಸಿಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com