ನವದೆಹಲಿ: ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾದ ಈ ಐವರು ಆಟಗಾರರು ಆಯ್ಕೆಯಾಗದಿರುವುದು ದುರಾದುಷ್ಟಕರ.
ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕನ್ನಡಿಗ ಮನೀಷ್ ಪಾಂಡೆ, ರಿಷಬ್ ಪಂತ್, ಕೃನಾಲ್ ಪಾಂಡ್ಯ, ಅಜಿಂಕ್ಯ ರಹಾನೆ ಮತ್ತು ಮಾಯಾಂಕ್ ಅಗರವಾಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಮನೀಷ್ ಪಾಂಡೆ ಪ್ರಸ್ತುತ ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿದ್ದಾರೆ. ಆಡಿರುವ ಎಂಟು ಪಂದ್ಯಗಳಲ್ಲಿ 88.60ರ ಸರಾಸರಿಯಲ್ಲಿ 171 ರನ್ ಗಳಿಸಿದ್ದಾರೆ. ಇನ್ನು ಡೆಲ್ಲಿ ಪರ ಆಡುತ್ತಿರುವ ಯುವ ಆಟಗಾರ ರಿಷಬ್ ಪಂತ್ ಆಡಿರುವ 10 ಪಂದ್ಯಗಳಲ್ಲಿ 173ರ ಸರಾಸರಿಯಲ್ಲಿ 393 ರನ್ ಗಳಿಸಿದ್ದಾರೆ.
ಆಲ್ರೌಂಡರ್ ಕೃನಾಲ್ ಪಾಂಡೆ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದು 148ರ ಸರಾಸರಿಯಲ್ಲಿ 181 ರನ್ ಬಾರಿಸಿದ್ದು 9 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕನಾಗಿರುವ ಅಜಿಂಕ್ಯ ರಹಾನೆ ರಾಜಸ್ತಾನ ರಾಯಲ್ಸ್ ಪರ ಆಡುತ್ತಿದ್ದು 335 ರನ್ ಗಳಿಸಿದ್ದಾರೆ. ಇದೇ ವೇಳೆ ಕರ್ನಾಟಕ ತಂಡದ ರಣಜಿ ಆಟಗಾರ ಮಾಯಾಂಕ್ ಅಗರವಾಲ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದು 135ರ ಸರಾಸರಿಯಲ್ಲಿ 118 ರನ್ ಬಾರಿಸಿದ್ದಾರೆ. ಈ ಐವರು ಆಟಗಾರರು ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಮುಂದಿನ ತಿಂಗಳು ಟೀಂ ಇಂಡಿಯಾ ಐರ್ಲೇಂಡ್ ವಿರುದ್ಧ ಟಿ20 ಸರಣಿ ಮತ್ತು ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲಿದ್ದು ನಿನ್ನೆ ಆಯ್ಕೆ ಸಮಿತಿ ಟೀಂ ಇಂಡಿಯಾದ ತಂಡವನ್ನು ಪ್ರಕಟಿಸಿತ್ತು.