ಕ್ರಿಕೆಟ್

ಬಟ್ಲರ್ ಭರ್ಜರಿ ಬ್ಯಾಟಿಂಗ್; ಚೆನ್ನೈ ವಿರುದ್ಧ ಗೆದ್ದ ರಾಜಸ್ತಾನ ರಾಯಲ್ಸ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ಭರ್ಜರಿ ಜಯ ಗಳಿಸಿದೆ...

ಬಟ್ಲರ್ ಭರ್ಜರಿ ಬ್ಯಾಟಿಂಗ್; ಚೆನ್ನೈ ವಿರುದ್ಧ ಗೆದ್ದ ರಾಜಸ್ತಾನ ರಾಯಲ್ಸ್
ರಾಜಸ್ತಾನ ರಾಯಲ್ಸ್
Published On :
ಜೈಪುರ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ಭರ್ಜರಿ ಜಯ ಗಳಿಸಿದೆ. 
ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ 95 ರನ್ ಗಳ ನೆರವಿನಿಂದ ರಾಜಸ್ತಾನ ರಾಯಲ್ಸ್ ತಂಡ 4 ವಿಕೆಟ್ ಗಳಿಂದ ಜಯ ಗಳಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು. 177 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ತಾನ ರಾಯಲ್ಸ್ ತಂಡ ಇನ್ನು 1 ಎಸತೆ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು. 
ಚೆನ್ನೈ ಪರ ಶೇನ್ ವಾಟ್ಸನ್ 39, ಸುರೇಶ್ ರೈನಾ 52, ಎಂಎಸ್ ಧೋನಿ 33 ಮತ್ತು ಬಿಲ್ಲಿಂಗ್ಸ್ 27 ರನ್ ಬಾರಿಸಿದ್ದರು. 
ರಾಜಸ್ತಾನ ರಾಯಲ್ಸ್ ಪರ ಜೋಸ್ ಬಟ್ಲರ್ 95, ಸಂಜು ಸ್ಯಾಮ್ಸನ್ 21, ಸ್ಟುವರ್ಟ್ ಬಿನ್ನಿ 22 ಮತ್ತು ಗೌತಮ್ 13 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.