ಡಿಲಿವಿಲಿಯರ್ಸ್ ಸಿಡಿಸಿದ ಸಿಕ್ಸರ್‌ಗೆ ದಂಗಾಗಿ ಬಾಯಿ ಮೇಲೆ ಕೈಯಿಟ್ಟ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಸಿಡಿಸಿದ ಸಿಕ್ಸರ್ ಗೆ ದಂಗಾಗಿ ವಿರಾಟ್ ಕೊಹ್ಲಿ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಸಿಡಿಸಿದ ಸಿಕ್ಸರ್ ಗೆ ದಂಗಾಗಿ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ದೆಹಲಿಯ ಫಿರೋಜ್ ಷಾ ಕೊಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ 37 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಆರು ಭರ್ಜರಿ ಸಿಕ್ಸರ್ ಸೇರಿದಂತೆ 72 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. 
ಈ ಮಧ್ಯೆ ಎಬಿಡಿ ವಿಲಿಯರ್ಸ್ ಸಿಡಿಸಿದ ಸಿಕ್ಸರ್ ಗೆ ತಂಡದ ನಾಯಕ ವಿರಾಟ್ ಕೊಹ್ಲಿ ದಿಗ್ಬ್ರಾಂತರಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿ ತಂಡ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 181 ರನ್ ಗಳಿಗೆ ಕಟ್ಟಿ ಹಾಕಿತು. 182 ರನ್ ಗಳ ಗುರಿ ಬೆನ್ನಟ್ಟಿದ ಆರ್ಸಿಬಿ ಇನ್ನು ಒಂದು ಓವರ್ ಬಾಕಿ ಇರುವಂತೆ ಜಯದ ನಗೆ ಬೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com