ಆರ್‌ಸಿಬಿ ಅಭಿಮಾನಿಗಳಿಗೆ ಕೊಟ್ಟ ಮಾತು ಉಳಿಸಿಕೊಂಡ್ರಾ ಎಬಿ ಡಿವಿಲಿಯರ್ಸ್?

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಸತತ ಸೋಲುಗಳು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆಯುಂಟು ಮಾಡಿತ್ತು...
ಎಬಿ ಡಿವಿಲಿಯರ್ಸ್
ಎಬಿ ಡಿವಿಲಿಯರ್ಸ್
Updated on: 
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಸತತ ಸೋಲುಗಳು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆಯುಂಟು ಮಾಡಿತ್ತು. 
ಈ ಮಧ್ಯೆ ತಂಡ ಫ್ಲೇ-ಆಫ್ ಪ್ರವೇಶಿಸುವ ಸಾಧ್ಯತೆಗಳು ದೂರವಾಗುತ್ತಿದ್ದಂತೆ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದರು. ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಟ್ವೀಟ್ ಮಾಡಿ ಇನ್ನು ಉಳಿದಿರುವ ನಾಲ್ಕು ಪಂದ್ಯಗಳಲ್ಲೂ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಹೇಳಿದ್ದರು. 
ಅಂತೆ ನಿನ್ನೆ ನಡೆದ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡ ಐದು ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಭರ್ಜರಿ 70 ರನ್ ಬಾರಿಸಿದ್ದರು. ಕೊಹ್ಲಿ ಜತೆಗೆ ಎಬಿ ಡಿವಿಲಿಯರ್ಸ್ ಸಹ ಭರ್ಜರಿ ಬ್ಯಾಟಿಂಗ್ ಮಾಡಿ 72 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. 
ಆರ್ಸಿಬಿ ಆಡಿರುವ 10 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ಉಳಿದಿರುವ 4 ಪಂದ್ಯಗಳು ತಂಡಕ್ಕೆ ಮಾಡು ಇಲ್ಲವೆ ಮಡಿ ಪಂದ್ಯಗಳಾಗಿದೆ. ನಾಲ್ಕು ಪಂದ್ಯಗಳ ಗೆಲುವಿನ ಜತೆಗೆ ಅದೃಷ್ಟದ ಬೆಂಬಲವೂ ಸಿಗಬೇಕು. ಅಂದರೆ ಆರ್ಸಿಬಿ ಫ್ಲೇ ಆಫ್ ಸಾಧ್ಯತೆಯು ಇತರೆ ಪಂದ್ಯಗಳ ಫಲಿತಾಂಶದಲ್ಲೂ ಅವಲಂಬಿಸಿರಲಿದೆ. 
ಇನ್ನು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಈ ನಡುವೆ ಮುಂದಿನ ನಾಲ್ಕು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 
ಆರ್ಸಿಬಿ ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಶನಿವಾರ ನಿರ್ಣಾಯಕ ಪಂದ್ಯವನ್ನಾಡುತ್ತಿದ್ದು ಈ ನಡುವೆ ಅಭಿಮಾನಿಗಳಿಗೆ ವಿಲಿಯರ್ಸ್ ಸಂದೇಶವನ್ನು ರವಾನಿಸಿದ್ದರು.
ಐಪಿಎಲ್ 11ನೇ ಆವೃತ್ತಿಯಲ್ಲಿ ಆರ್ಸಿಬಿ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದನ್ನು ಒಪ್ಪಿಕೊಂಡಿರುವ ಎಬಿಡಿ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿಲ್ಲ. ಆದರೆ ಮುಂದಿನ ನಾಲ್ಕು ಪಂದ್ಯಗಳಲ್ಲೂ ಶ್ರೇಷ್ಠ ಪ್ರದರ್ಶನ ನೀಡುವ ನಂಬಿಕೆಯನ್ನು ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com